
ಮಂಗಳೂರು: ಮನೆಯ ಹಿಂಬದಿಯ ಕಂಪೌಂಡ್ ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಲ್ಲಾಳದ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಮನೆಯಲ್ಲಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮತ್ತು ಅವರ ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟಿದ್ದಾರೆ.
ಮೃತರೆಲ್ಲರು ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಇಬ್ಬರ ಶವ ಮೇಲೆತ್ತಲಾಗಿದೆ ಎಂದು ತಿಳಿದುಬಂದಿದೆ.
