
ಉಡುಪಿ: ಮೋದಿಯವರ 10 ವರ್ಷದ ಆಡಳಿತ ಟ್ರೈಲರ್ ಮಾತ್ರ, ಪಿಚ್ಚರ್ ಬಾಕಿ ಹೈ. ಈ ಚುನಾವಣೆಯಲ್ಲಿ ಮೋದಿ ಮತ್ತೇ ಪ್ರಧಾನಿ ಆದರೇ ಪರಿವಾರ ವಾದ ನಿರ್ನಾಮವಾಗುತ್ತದೆ. ದೇಶ ಉಳಿದರೇ ಹಿಂದುತ್ವ ಉಳಿಯುತ್ತದೆಂದು ಜನರಿಗೆ ಅರಿವಾಗಿದೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಬುಧವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್ ಜೈಲಿಗೆ ಹೋಗಿದ್ದಾರೆ, ಮುಂದೆ ಡಿಂಗ್ರಿವಾಲ, ಎಲ್ಲರೂ ಜೈಲಿಗೆ ಹೋಗುತ್ತಾರೆ. ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಲೋಕಸಭಾ ಚುನಾವಣೆ ಭವಿಷ್ಯವನ್ನು ಬರೆಯುವ ಚುನಾವಣೆಯಾಗಿದೆ. ಪ್ರಧಾನಿ ಮೋದಿ ಅವರಿಗೆ ರಾಜಕೀಯ ವೃತ್ತಿಯಲ್ಲ. ಅದೊಂದು ವೃತ.ಲೋಕಸಭೆಯಲ್ಲಿ ಮೋದಿ ಅವರಿಗೆ ಬೆಂಬಲವಾಗಿ ಜನತೆಯ ಪರವಾಗಿ ಕೈ ಎತ್ತಲು ನಿಮ್ಮೂರಿನ ಈ ಹುಡುಗನಿಗೆ ಅವಕಾಶ ನೀಡಿ ಎಂದು ವಿನಂತಿ ಮಾಡಿಕೊಂಡರು.
ಈ ಸಂಧರ್ಭ ಮಾಜಿ ರಾ.ಪ್ರ. ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಯಶಪಾಲ್ ಸುವರ್ಣ, ಕಿರಣ್ ಕೊಡ್ಗಿ,ವಿ.ಪ.ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಮತ್ತು ಭೋಜೆ ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಮತ್ತು ರಂಜಿತ್ ಅಜಿತ್ ಕುಮಾರ್, ಉಭಯ ಪಕ್ಷಗಳ ನಾಯಕರಾದ ಅರಗ ಜ್ಞಾನೇಂದ್ರ, ಎಂ.ಕೆ.ಪ್ರಾಣೇಶ್, ಉದಯಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಜೀವರಾಜ್, ಕಲ್ಮುರಡಪ್ಪ, ರಘುಪತಿ ಭಟ್, ಮಟ್ಟಾರು ರತ್ನಾಕರ ಹೆಗ್ಡೆ, ಮಣಿರಾಜ್ ಶೆಟ್ಟಿ, ಕೃಷ್ಣ ಪಾಲೆಮಾರ್, ಶಿಲ್ಪ ಸುವರ್ಣ ಉಪಸ್ಥಿತರಿದ್ದರು.
ಇನ್ನು ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಸ್ವಾಗತಿದರು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ ನಿರೂಪಿಸಿ, ರೇಶ್ಮಾ ಉದಯ ಶೆಟ್ಟಿ ವಂದಿಸಿದರು.
