ಉಡುಪಿ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ.ಉಪ್ಪುಂದ ಹಾಗೂ ರೈತ ಸಿರಿ, ರೈತ ಸೇವಾ ಒಕ್ಕೂಟ ಉಪ್ಪುಂದ ಇದರ ಆಶ್ರಯದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ಡಿಸೆಂಬರ್ 23 ರಂದು ಪೂರ್ವಹ್ನ 10.30ಕ್ಕೆ ನಾಗೂರು ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆಯಲಿದೆ.
ಈ ಸಮಾರಂಭದಲ್ಲಿ ಹಿರಿಯ ರೈತರ ಸನ್ಮಾನ, ಸಾಧಕರಿಗೆ ರೈತಸಿರಿ ಗೌರವಾರ್ಪಣೆ ಹಾಗೂ ಹಾಲು ಉತ್ಪಾದಕರಿಗೆ ಪುರಸ್ಕಾರ ನಡೆಯಲಿದೆ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಅವರು ಹಿರಿಯ ರೈತರಿಗೆ ಹಾಗೂ ಹಾಲು ಉತ್ಪಾದಕರಿಗೆ ಸಮ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷ ಶೇಖರ ಖಾರ್ವಿ, ಸಹಕಾರ ಸಂಘಗಳ ಕುಂದಾಪುರ ಉಪವಿಭಾಗದ ಸಹಾಯಕ ನಿಬಂಧಕ ಅರುಣ ಕುಮಾರ್ ಎಸ್.ವಿ. ಭಾಗವಹಿಸಲಿದ್ದಾರೆ. ಪ್ರಗತಿಪರ ಕೃಷಿಕ ವೆಂಕಟ ಪೂಜಾರಿ ಉಬ್ಜೇರಿ ಅವರಿಗೆ ಸಮ್ಮಾನ ನಡೆಯಲಿದೆ.
ವಿಶೇಷ ಆಹ್ವಾನಿತರಾಗಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಜೆ ನಿಧೀಶ್ ಹೊಳ್ಳ, ಸಹಾಯಕ ಕೃಷಿ ನಿರ್ದೇಶಕರಾದ ರೂಪ ಜೆ. ಮಾಡ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಬಿ. ಧನಂಜಯ ಭಾಗವಹಿಸಲಿದ್ದಾರೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಉಪಾಧ್ಯಕ್ಷ ಈಶ್ವರ ಹಕ್ಲತೋಡ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
