
ಮಂಗಳೂರು: ಏ.14ರಂದು ಸಂಜೆ 7.45ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಆರಂಭವಾಗುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 7.30ಕ್ಕೆ ಬಂದು ಅಲ್ಲಿಂದ ವಾಹನದಲ್ಲಿ ನಾರಾಯಣ ಗುರು ವೃತ್ತಕ್ಕೆ ಬರಲಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ರೋಡ್ ಶೋ ಆರಂಭವಾಗಲಿದ್ದು, ಲಾಲ್ ಬಾಗ್, ಬಳ್ಳಾಲ್ ಬಾಗ್, ಪಿವಿಎಸ್ ವೃತ್ತದ ಮಾರ್ಗವಾಗಿ ನವ ಭಾರತ್ ವೃತ್ತದಲ್ಲಿ ರೋಡ್ ಶೋ ಕೊನೆಗೊಳ್ಳಲಿದೆ ಎಂದರು.
