Home ಕರ್ನಾಟಕ ಕರಾವಳಿ ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸ್ಕೀಮ್ ನೌಕರರಿಂದ ಅಹೋರಾತ್ರಿ ಧರಣಿ

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸ್ಕೀಮ್ ನೌಕರರಿಂದ ಅಹೋರಾತ್ರಿ ಧರಣಿ

0
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸ್ಕೀಮ್ ನೌಕರರಿಂದ ಅಹೋರಾತ್ರಿ ಧರಣಿ

ಉಡುಪಿ: ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರು ಹಾಗೂ ಆಶಾ ಕಾರ್ಯಕರ್ತೆಯರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಫೆಡರೇಷನ್ ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಗೊಂಡಿತು.

ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಕೇಂದ್ರ ಸರಕಾರ ವಿರುದ್ಧ ಘೋಷಣೆ ಕೂಗಿದರು. ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ರು.

ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ 31 ಸಾವಿರ ಕನಿಷ್ಠ ವೇತನ ಜಾರಿಗೊಳಿಸಬೇಕು. ಸಾಮಾಜಿಕ ಭದ್ರತೆಗಳಾದ ಇಎಸ್ ಐ, ಪಿಎಫ್, ಪೆನ್ಶನ್, ಎನ್ ಪಿಎಸ್ ಬದಲಿಗೆ ಒಪಿ ಜಾರಿಗೊಳಿಸಬೇಕು. ಐಸಿಡಿಎಸ್ ಕಡಿತ ಮಾಡಿರುವ 8200 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಬಜೆಟ್ ನಲ್ಲಿ ಎಂಡಿಎಂಗೆ ಅನುದಾನ ಹೆಚ್ಚಳ ಹಾಗೂ ಕನಿಷ್ಠ ವೇತನ ಘೋಷಿಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.

ಸಿಐಟಿಯು ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಕೆ. ಶಂಕರ್, ಸುರೇಶ್ ಕಲ್ಲಗಾರ ಮಾತನಾಡಿದರು.
ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಭಾರತಿ, ಪ್ರಧಾನ ಕಾರ್ಯದರ್ಶಿ ಸುಶೀಲ ನಾಡ, ಕೋಶಾಧಿಕಾರಿ ಯಶೋಧ ಕೆ., ಜಯಶ್ರೀ ಬೈಂದೂರು, ಜಯಶ್ರೀ ಕಾರ್ಕಳ, ಶೃಂಗಾರಿ ನಾವುಂದ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶೀಲಾವತಿ, ಸಿಐಟಿಯು ಮುಖಂಡರಾದ ಎಚ್. ನರಸಿಂಹ, ಕವಿರಾಜ್ ಎಸ್., ಚಂದ್ರಶೇಖರ್, ಉಮೇಶ್ ಕುಂದರ್ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here