
ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಪರ್ಯಾಯೋತ್ಸವದ ಹಿನ್ನೆಲೆಯಲ್ಲಿ ಮೂರನೇ ದಿನದ ಹೊರಕಾಣಿಕೆ ಸಮರ್ಪಣೆ ಶುಕ್ರವಾರ ನಡೆಯಿತು.
ಬೈಂದೂರು ತಾಲೂಕು, ಕುಂದಾಪುರ ತಾಲೂಕು, ಬ್ರಹ್ಮಾವರ ತಾಲೂಕು, ಮಂದಾರ್ತಿ ವಲಯ, ಕೋಟ ವಲಯ, ಉಪ್ಪುರು, ಹಾವಂಜೆ ವಲಯ, ಕಲ್ಯಾಣಪುರ ಸಂತೆಕಟ್ಟೆ ವಲಯ, ಸಗ್ರಿ, ಚಕ್ರತೀರ್ಥ ವಲಯ, ಪೇರಂಪಳ್ಳಿ ವಲಯ, ಕೊಡವೂರು ವಲಯದಿಂದ ಹೊರೆಕಾಣಿಕೆ ತರಲಾಗಿದ್ದು, ಸಾವಿರಾರು ಮಂದಿ ಭಾಗವಹಿಸಿದ್ದರು.
ಮೆರವಣಿಗೆಯು ಜೋಡುಕಟ್ಟೆಯಿಂದ ಹಳೆ ಡಯಾನ, ಕೆಎಂ ಮಾರ್ಗ, ತ್ರಿವೇಣಿ ಸರ್ಕಲ್, ಸಂಸ್ಕೃತ ಕಾಲೇಜು ಮೂಲಕ ಮುಖ್ಯ ರಸ್ತೆಯಲ್ಲಿ ಪುತ್ತಿಗೆ ಮಠಕ್ಕೆ ಸಾಗಿ ಬಂತು. ಮೆರವಣಿಗೆಯಲ್ಲಿ ಹೊರಕಾಣಿಕೆ ಸಮಿತಿ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪುತ್ತಿಗೆ ಮಠದ ದಿವಾನರಾದ ಪ್ರಸನ್ನ ಆಚಾರ್ಯ, ನಾಗರಾಜ ಆಚಾರ್ಯ, ಪ್ರಮುಖರಾದ ರಮೇಶ್ ಭಟ್, ಮಂಜುನಾಥ್ ಉಪಾಧ್ಯ, ರವೀಂದ್ರ ಆಚಾರ್ಯ, ವಿಜಯ ರಾಘವ ರಾವ್, ವೀಣಾ ಶೆಟ್ಟಿ, ವಿಜಯ ಕೊಡವೂರು, ರಾಮಚಂದ್ರ ಉಪಾಧ್ಯಾಯ, ಶ್ರೀನಿವಾಸ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.
