Home ಕರ್ನಾಟಕ ಕರಾವಳಿ ಮಂಗಳೂರು: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ; ಪತ್ತೆಗೆ ಏಳು ಪೊಲೀಸ್ ತಂಡಗಳ ರಚನೆ

ಮಂಗಳೂರು: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ; ಪತ್ತೆಗೆ ಏಳು ಪೊಲೀಸ್ ತಂಡಗಳ ರಚನೆ

0
ಮಂಗಳೂರು: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ; ಪತ್ತೆಗೆ ಏಳು ಪೊಲೀಸ್ ತಂಡಗಳ ರಚನೆ

ಮಂಗಳೂರು: ಇಲ್ಲಿನ ಫರಂಗಿಪೇಟೆ ಎಂಬಲ್ಲಿ ಪಿಯುಸಿ ಓದುತ್ತಿದ್ದ17 ವರ್ಷದ ವಿದ್ಯಾರ್ಥಿ ದಿಗಂತ್ ಕಾಣೆಯಾಗಿದ್ದು, ಆತನ ಪತ್ತೆಗಾಗಿ ರಾಜ್ಯ ಸರ್ಕಾರ ಏಳು ಪೊಲೀಸ್ ತಂಡಗಳನ್ನು ರಚಿಸಿದೆ.

ದಿಗಂತ್ ಪಿಯುಸಿ ವಿದ್ಯಾರ್ಥಿಯಾಗಿದ್ದು, ಫೆಬ್ರವರಿ 25 ರಿಂದ ನಾಪತ್ತೆಯಾಗಿದ್ದಾನೆ. ಈ ವಿಚಾರವನ್ನು ಬುಧವಾರ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಪ್ರಸ್ತಾಪಿಸಿದರು ಮತ್ತು ನಾಪತ್ತೆ ಪ್ರಕರಣದ ತನಿಖೆಯನ್ನು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಿದರು.

ಇದಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಅವರ ಪರವಾಗಿ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ , ದಿಗಂತ್ ದ್ವಿತೀಯ ಪಿಯುಸಿ ಓದುತ್ತಿದ್ದಾನೆ ಪತ್ತೆಗಾಗಿ ತಂಡ ರಚಿಸಲಾಗಿದೆ ಎಂದು ಸದನಕ್ಕೆ ತಿಳಿಸಿದರು.

ಫೆಬ್ರವರಿ 25 ರಂದು, ತನ್ನ ಹಾಲ್ ಟಿಕೆಟ್ ಪಡೆಯಲು ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿ ಮನೆಗೆ ಮರಳಿಲ್ಲ. ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತನ್ನ ಕುಟುಂಬ ಸದಸ್ಯರಿಗೆ ಆತ ತಿಳಿಸಿದ್ದ. ಅಂದಿನಿಂದ ವಿದ್ಯಾರ್ಥಿ ಕಾಣೆಯಾಗಿದ್ದು, ಪೊಲೀಸರಿಗೆ ಆತನ ಮೊಬೈಲ್ ಫೋನ್ ಸಿಕ್ಕಿದೆ. ಆದರೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದರು.

ದ.ಕ ಜಿಲ್ಲೆಯ ಬಂಟ್ವಾಳ ಬಳಿಯ ಫರಂಗಿಪೇಟೆ ಪಟ್ಟಣದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆಯಾಗಿ ವಾರ ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರ ನಿಷ್ಕ್ರಿಯತೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ಶನಿವಾರ ಫರಂಗಿಪೇಟೆ ಬಂದ್ ಮಾಡಿ, ಪ್ರತಿಭಟನೆ ನಡೆಸಿದ್ದವು.

 

LEAVE A REPLY

Please enter your comment!
Please enter your name here