Home ಕರ್ನಾಟಕ ಕರಾವಳಿ ನೇಣಿಗೆ ಶರಣಾದ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಹಾಗೂ ಪತ್ನಿ

ನೇಣಿಗೆ ಶರಣಾದ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಹಾಗೂ ಪತ್ನಿ

0
ನೇಣಿಗೆ ಶರಣಾದ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಹಾಗೂ ಪತ್ನಿ

ಕಾಪು: ಕಾಪು ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.

ಲೀಲಾಧರ ಶೆಟ್ಟಿ ಸರಳ ಸಜ್ಜನ ವ್ಯಕ್ತಿಯಾಗಿದ್ದು, ರಂಗ ಕಲಾವಿದ ಹಾಗೂ ಸಮಾಜ ಸೇವಕರೂ ಆಗಿದ್ದರು. ಜೊತೆಗೆ ಅತ್ಯುತ್ತಮ ನಾಟಕ ತಂಡ ಹೊಂದಿದ್ದ ಇವರು ಕಾಪು ರಂಗತರಂಗ ತಂಡದ ಯಜಮಾನ ಆಗಿ ಜನ ಮನ್ನಣೆ ಪಡೆದಿದ್ದರು.

ಕಾಪುಶಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಆತ್ಯಂತ ಆಪ್ತರಾಗಿದ್ದ ಅವರು ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ, ಅತ್ಯುತ್ತಮ ನಟ ಮತ್ತು ನಿರ್ದೇಶಕ ಆಗಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಪತಿ, ಪತ್ನಿ ಇಬ್ಬರೂ . ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುವುದು ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುಂಚಿತವಾಗಿ ಪತ್ರ ಬರೆದಿಟ್ಟಿದ್ದಾರೆ ಎನ್ನಲಾಗುತ್ತಿದೆ. ರಾತ್ರಿ ೨ ಗಂಟೆ ವೇಳೆಗೆ ಗಂಡ ಹೆಂಡತಿ ಒಂದೇ ಹಗ್ಗವನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಊಹಿಸಲಾಗಿದೆ. ಪೊಲೀಸರ ತನಿಖೆಯ ಬಳಿಕ ಸತ್ಯಾಸತ್ಯತೆ ತಿಳಿದುಬರಬೇಕಿದೆ.

 

LEAVE A REPLY

Please enter your comment!
Please enter your name here