
ಉಡುಪಿ: ಧಾರ್ಮಿಕ ವಿಚಾರ ಧಾರ್ಮಿಕ ವ್ಯಕ್ತಿಗಳಿಗೆ ಸಂಬಂಧಪಟ್ಟದ್ದು. ಈ ವಿಚಾರದಲ್ಲಿ ನ್ಯಾಯಾಲಯಗಳ ಹಸ್ತಕ್ಷೇಪ ಸರಿಯಲ್ಲ. ಹಾಗೆಯೇ ಆಧ್ಯಾತ್ಮಿಕ ವಿಚಾರ ವಿಶ್ವವ್ಯಾಪಿ ಆಗಬೇಕು. ಧರ್ಮ ಎನ್ನುವುದು ದೇಶಾತೀತ, ಪ್ರಪಂಚದಾದ್ಯಂತ ಹಿಂದುಗಳಿದ್ದಾರೆ ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ಸ್ವಾಮೀಜಿ ಹೇಳಿದರು.
ಪುತ್ತಿಗೆ ಮಠದ ಪರ್ಯಾಯ ವಿರುದ್ಧ ಪಿಎಎಲ್ ಅರ್ಜಿ ವಜಾ ಕುರಿತು ಉಡುಪಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೃಷ್ಣನ ಅನುಗ್ರಹ ಇದ್ದರೆ ಎಲ್ಲವೂ ಒಳ್ಳೆಯದಾಗುತ್ತೆ. ನ್ಯಾಯಮೂರ್ತಿಗಳು ಒಳ್ಳೆಯ ವಿಚಾರವನ್ನೇ ಹೇಳಿದ್ದಾರೆ. ನಾವು ಯಾವುದೇ ದೈಶಿಕ ವಿಚಾರಕ್ಕೆ ಒಳಪಟ್ಟವರಲ್ಲ. ಆಧ್ಯಾತ್ಮಿಕ ವಿಚಾರ ಗಡಿ ದಾಟಿ ಇರಬೇಕು. ಅದಕ್ಕೆ ಯಾವುದೇ ಬ್ಯಾರಿಗೇಟ್ ಇರಬಾರದು, ಒಳ್ಳೆಯ ವಿಚಾರ ಎಲ್ಲಾ ಕಡೆ ಪಸರಿಸಬೇಕು. ದೈಶಿಕ ನಿರ್ಬಂಧಕ್ಕೆ ಧಾರ್ಮಿಕ ವಿಚಾರ ಒಳಗಾಗಬಾರದು ಎಂದರು. ಇನ್ನು ಸದ್ವಿಚಾರಗಳು ಪ್ರಪಂಚದಲ್ಲಿ ವ್ಯಾಪ್ತವಾಗಬೇಕು ಎಂದರು.
