
ಉಡುಪಿ: ಜನವರಿ 17-18ರಂದು ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರು ಉಡುಪಿಯ ಆದರ್ಶ ಆಸ್ಪತ್ರೆಗೆ ಭೇಟಿ ನೀಡಿದರು.
ಸ್ವಾಮೀಜಿಯವರು ಆಗಮಿಸುವಾಗ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಡಾ। ಜಿ.ಎಸ್. ಚಂದ್ರಶೇಖರ್ ಹಾಗು ವಿಮಲಾ ಜಿ.ಎಸ್ ಸ್ವಾಗತಿಸಿ ಬರಮಾಡಿಕೊಂಡರು. ಬಳಿಕ ಸ್ವಾಮೀಜಿಯವರಿಗೆ ಪಾದಪೂಜೆ ನೆರವೇರಿಸಲಾಯಿತು. ಸ್ವಾಮೀಜಿಗಳು ಆಶೀರ್ವಚನ ನೀಡುತ್ತಾ ಬಂದಂತಹ ಎಲ್ಲರಿಗೂ ಪರ್ಯಾಯದ ಆಮಂತ್ರಣ ನೀಡಿದರು. ಆಹಾರತಜ್ಞೆ ಅನುಶ್ರೀ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಆದರ್ಶ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
