Home ಕರ್ನಾಟಕ ಕರಾವಳಿ ಉಡುಪಿ: ಬೆಳಗಾವಿ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಉಡುಪಿ: ಬೆಳಗಾವಿ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ

0
ಉಡುಪಿ: ಬೆಳಗಾವಿ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಉಡುಪಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮಹಿಳೆಯರ ಬಗ್ಗೆೆ ಯಾವುದೇ ರೀತಿಯ ಕಾಳಜಿ ಇಲ್ಲ. ರಾಜ್ಯ ಸರಕಾರ ಬೆಳಗಾವಿಯಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸಬೇಕು ಮತ್ತು ಆ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆೆ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದರು.

ಬೆಳಗಾವಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣ ಖಂಡಿಸಿ, ಮತ್ತು ಭ್ರೂಣ ಹತ್ಯೆೆ ಜಾಲವನ್ನು ತಕ್ಷಣವೇ ಭೇದಿಸಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜಿಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎದುರು ಸೋಮವಾರ ಆಯೋಜಿಸಿದ ಪ್ರತಿಭಟನೆಯಲ್ಲಿ ಅವರು ಆಗ್ರಹಿಸಿದರು.

ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆೆ ವೀಣಾ ಎಸ್. ಶೆಟ್ಟಿ ಮಾತನಾಡಿ, ಕ್ಷುಲಕ ಕಾರಣಕ್ಕೆೆ ಅಮಾನವೀಯ ಘಟನೆ ನಡೆಸಿದವರ ವಿರುದ್ಧ ಕ್ರಮ ಆಗಲೇಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ಬಳಿಕ ಅಪರ ಜಿಲ್ಲಾಧಿಕಾರಿ ಮಮತಾ ದೇವಿಯವರನ್ನು ಭೇಟಿ ಮಾಡಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷೆೆ ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಪ್ರಮುಖರಾದ ಗುರುಪ್ರಸಾದ್ ಶೆಟ್ಟಿ, ವೀಣಾ ನಾಯಕ್‌, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ದಾವೂದ್ ಅಬೂಬಕ್ಕರ್, ವಿಜಯ ಕೊಡವೂರು, ಪ್ರಭಾಕರ ಪೂಜಾರಿ, ಗಿರೀಶ್ ಅಂಚನ್, ಟಿ.ಜಿ. ಹೆಗಡೆ, ಭಾರತಿ ಚಂದ್ರಶೇಖರ್, ಗಿರಿಧರ್, ಸವಿತಾ ಹರೀಶ್ ರಾಮ್, ರೋಶನ್ ಶೆಟ್ಟಿ, ಅಕ್ಷಯ್ ಶೆಟ್ಟಿ, ರಶ್ಮಿತಾ ಶೆಟ್ಟಿ, ದಿಲೇಶ್, ಸುಜಲಾ ಸತೀಶ್, ತಾರಾ ಆಚಾರ್ಯ ಮೊದಲಾದವರು ಭಾಗವಹಿಸಿದ್ದರು.

 

LEAVE A REPLY

Please enter your comment!
Please enter your name here