Home ಕರ್ನಾಟಕ ಕರಾವಳಿ ಉಡುಪಿ ಪರ್ಯಾಯಮಹೋತ್ಸವಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ ಪರ್ಯಾಯಮಹೋತ್ಸವಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್

0
ಉಡುಪಿ ಪರ್ಯಾಯಮಹೋತ್ಸವಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ರು.

ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳುತ್ತಿರುವೆ. ಪರ್ಯಾಯ ಮಹೋತ್ಸವಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ವಿವಿಧ ಕಾರಣಗಳಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

 

LEAVE A REPLY

Please enter your comment!
Please enter your name here