Home ಕರ್ನಾಟಕ ಕರಾವಳಿ ಪರಶುರಾಮ ಥೀಂ ಪಾರ್ಕ್ ವಿಚಾರ ಸಿಐಡಿ ತನಿಖೆ ನಡೆಸುವುದನ್ನು ಸ್ವಾಗತಿಸುವೆ: ಸುನಿಲ್ ಕುಮಾರ್

ಪರಶುರಾಮ ಥೀಂ ಪಾರ್ಕ್ ವಿಚಾರ ಸಿಐಡಿ ತನಿಖೆ ನಡೆಸುವುದನ್ನು ಸ್ವಾಗತಿಸುವೆ: ಸುನಿಲ್ ಕುಮಾರ್

0
ಪರಶುರಾಮ ಥೀಂ ಪಾರ್ಕ್ ವಿಚಾರ ಸಿಐಡಿ ತನಿಖೆ ನಡೆಸುವುದನ್ನು ಸ್ವಾಗತಿಸುವೆ: ಸುನಿಲ್ ಕುಮಾರ್

ಉಡುಪಿ: ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಶಾಸಕ‌ ವಿ.‌ಸುನಿಲ್‌ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳ ಹಿಂದೆಯೇ ನಾನು ಆಗ್ರಹಿಸಿದ್ದೆ. ಸರ್ಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಒತ್ತಾಯಿಸುತ್ತೇನೆ.

ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಧನ್ಯವಾದಗಳು ಎಂದು ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here