Home ಕರ್ನಾಟಕ ಕರಾವಳಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಕಟ್ಟೆಚ್ಟರ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಕಟ್ಟೆಚ್ಟರ

0
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಕಟ್ಟೆಚ್ಟರ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಸಂಭವವಿದ್ದು, ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಾಯುಭಾರದಿಂದಾಗಿ ಸಮುದ್ರದ ಅಲೆಗಳಲ್ಲೂ ಕೂಡ ಭಾರಿ ಏರಿಳಿತಗಳು ಕಂಡುಬರುವುದರಿಂದ ಮುಂಜಾಗೃತ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿದೆ. ಅಲ್ಲದೇ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೂ ಕೂಡ ನದಿ ತೀರದ ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ. ಮುಂದುವರಿದು ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ನೆರೆ ಪೀಡಿತ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ತಿಳಿಸಿದೆ.

 

LEAVE A REPLY

Please enter your comment!
Please enter your name here