ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಈ ಭಾರಿ ಉಂಟಾದ ಭಾರೀ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದರು. ವರುಣಾರ್ಭಟಕ್ಕೆ ಅಪಾರ ಆಸ್ತಿ, ಬೆಳೆ, ಜೀವ ಹಾನಿ ಸಂಭವಿಸಿದ್ದವು. ಸಾಕಷ್ಟು ಅವಘಡವನ್ನುಂಟು ಮಾಡಿದ್ದ ಮಳೆರಾಯನ ಅಟ್ಟಹಾಸಕ್ಕೆ ಜನರು ನಲುಗಿ ಹೋಗಿದ್ದರು. ಇದೀಗ ಕರಾವಳಿ ಸೇರಿ ಇತರೆಡೆ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ವರುಣ ಮತ್ತೆ ತನ್ನ ಆರ್ಭಟ ತೋರಿಸಲು ಸಜ್ಜಾಗುತ್ತಿದ್ದಾನೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
