
ಮಂಗಳೂರು: ರಾಜ್ಯದಲ್ಲಿ ಮುಂಗಾರಿನ ಅಬ್ಬರ ಮುಂದುವರಿದಿದ್ದು ಕರಾವಳಿ ಭಾಗದ ಜನತಯಂತೂ ಮಳೆಯ ಆರ್ಭಟಕ್ಕೆ ನಲುಗಿ ಹೋಗಿದ್ದಾರೆ. ಶಾಲಾ-ಕಾಲೇಜಿಗೆ ವಾರಗಟ್ಟಲೆ ರಜೆ ಘೋಷಣೆ ಮಾಡಲಾಗುತ್ತಿದೆ. ಮನೆ, ಅಂಗಡಿಗಳಿಗೂ ನೀರು ನುಗ್ಗಿವೆ. ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೌದು, ರಾಜ್ಯದ ಕರಾವಳಿ ಭಾಗದಲ್ಲಿ ಜುಲೈ 12ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ. ಅಲ್ಲದೇ ಸಮುದ್ರ, ನದಿಗೆ ಕೂಡ ತೆರಳದಂತೆ ಎಚ್ಚರಿಕೆಯನ್ನು ನೀಡಲಾಗಿದ. ಜನರು ತಮ್ಮ ತಮ್ಮ ಜಾಗೃತೆಯಲ್ಲಿ ತಾವು ಇದ್ದರೆ ಅಪಾಯವನ್ನು ತಪ್ಪಿಸಬಹುದಾಗಿದೆ. ಜೊತೆಗೆ ಕರೆಂಟ್ ಕಂಬದ ಕೆಳಗೆ ನಿಲ್ಲುವುದು, ತುಂಡಾದ ತಂತಿ ಬಿದ್ದಿದ್ದಲ್ಲಿ ಅದನ್ನು ಮುಟ್ಟಲು ಹೋಗುವುದನ್ನು ಮಾಡಬಾರದು ಎಂದು ಸೂಚಿಸಲಾಗಿದೆ.
