
ಉಡುಪಿ: ಉಡುಪಿಯ ಆದರ್ಶ ಆಸ್ಪತ್ರೆಯ ಖ್ಯಾತ ಹಿರಿಯ ವೈದ್ಯ ಹಾಗೂ ನರರೋಗ ತಜ್ಞ ಡಾ.ರಾಜಾ(73) ಅವರು ರವಿವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಣಿಪಾಲದ ರಾಜೀವ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
