ಬೆಂಗಳೂರು: ಉಡುಪಿ ಅಂಬಲಪಾಡಿಯ ಬಾರ್ ಮಾಲೀಕರ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
