Home ಕರ್ನಾಟಕ ಕರಾವಳಿ ನಿಲ್ಲದ ವರುಣಾರ್ಭಟ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ನಿಲ್ಲದ ವರುಣಾರ್ಭಟ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

0
ನಿಲ್ಲದ ವರುಣಾರ್ಭಟ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿ ಸುರಿದ ಭಾರೀ ಮಳೆಗೆ ಜನತೆ ತತ್ತರಿಸಿ ಹೋಗಿದ್ದಾರೆ. ಅಪಾರ ಆಸ್ತಿ, ಮನೆ, ಬೆಳೆ, ಪ್ರಾಣ ಹಾನಿ ಸಂಭಿವಿಸಿದ್ದು, ಜನರು ಕಂಗಾಲಾಗಿದ್ದಾರೆ. ಮುಂದಿ  24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್‌ 5 ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಈ ಭಾಗಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವ ಇರುವ ಹಿನ್ನೆಲೆ ಮೀನುಗಾರರಿಗೆ ಮೀನುಗಾರಿಕೆ ತೆರಳದಂತೆ ಸೂಚನೆ ನೀಡಲಾಗಿದ್ದು, ಪ್ರವಾಸಿಗರಿಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

 

LEAVE A REPLY

Please enter your comment!
Please enter your name here