Home ಕರ್ನಾಟಕ ಆಗಸ್ಟ್‌ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ: ಅರ್ಜಿ ಸಲ್ಲಿಕೆಗೆ ಆಪ್‌ ತಯಾರಿ: ಲಕ್ಷ್ಮಿ ಹೆಬ್ಬಾಳ್ಕರ್‌

ಆಗಸ್ಟ್‌ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ: ಅರ್ಜಿ ಸಲ್ಲಿಕೆಗೆ ಆಪ್‌ ತಯಾರಿ: ಲಕ್ಷ್ಮಿ ಹೆಬ್ಬಾಳ್ಕರ್‌

0
ಆಗಸ್ಟ್‌ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ: ಅರ್ಜಿ ಸಲ್ಲಿಕೆಗೆ ಆಪ್‌ ತಯಾರಿ: ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ. ಪ್ರತಿ ಕುಟುಂಬದ ಯಜಮಾನಿಗೆ 2000 ರೂ ಗಳನ್ನು ನೀಡುವ ಈ ಯೋಜನೆಯ ಸದುಪಯೋಗ ಪಡೆಯಲು ಯೋಜನೆಯ ಅರ್ಜಿ ಸ್ವೀಕಾರಕ್ಕೆ ಆಪ್‌ ತಯಾರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಶುಕ್ರವಾರ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಪೂರ್ವಸಭೆ ನಡೆಸಲಾಗಿದ್ದು, ಆಗಸ್ಟ್‌ 17 ಅಥವಾ 18 ರಂದು ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಯೋಜನೆಯ ಅರ್ಜಿ ಸ್ವೀಕಾರಕ್ಕೆ ಆಪ್‌ ತಯಾರಿಸಲಾಗುವುದು. ಈ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ತೆಗದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here