ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಪರವಾಗಿ ಅನೇಕ ಘೋಷಣೆಗಳನ್ನು ಮಾಡುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಶೀಘ್ರವೇ ಹೆಚ್ಚಿಸುವ ಭರವಸೆ ನೀಡಿದ ಬಳಿಕ ಇದೀಗ ಆಶಾಕಾರ್ಯಕರ್ತೆಯರ ಬೇಡಿಕೆಯನ್ನೂ ಕೂಡ ಈಡೇರಿಸುವಲ್ಲಿ ಮುಂದಾಗಿದೆ.
ಹೌದು, ಈ ಹಿಂದೆ ಆಶಾಕಾರ್ಯಕರ್ತೆಯರು ತಮ್ಮ ಗೌರವಧನ ಪಾವತಿ ವಿಳಂಬದ ವಿರುದ್ಧ ಪ್ರತಿಭಟನೆಯನ್ನು ನಡೆಸಿದ್ದರು, ಈ ಹಿನ್ನೆಲೆ ಸರ್ಕಾರ ಈ ಬಗ್ಗೆ ಸೂಕ್ತ ನಿರ್ಧಾರವನ್ನು ತೆಗೆದುಕೊಂಡಿದೆ. ಇಂದು ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ನಡೆದ ಸಭೆಯಲ್ಲಿ, ಆಶಾಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ಮುಂದಿನ ತಿಂಗಳ 10ರೊಳಗೆ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
