
ಉಡುಪಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದುಕೊಂಡರು.
ಈ ವೇಳೆಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ಪಾಡಿಗಾರ್, ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಇನ್ನು, ಉಡುಪಿಯ ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ತಾವು ಸಹ ಬಸ್ ಏರಿ ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಟಕೆಟ್ ಹಾಗೂ ಗುಲಾಬಿ ವಿತರಿಸಿ, ಅದೇ ಬಸ್ ನಲ್ಲಿ ಪ್ರಯಾಣಿಸಿದರು.
