
ಉತ್ತರ ಭಾರತದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಸುಮಾರು 10ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಜಮ್ಮು ಕಾಶ್ಮೀರ, ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಾಶ್ಮೀರದಲ್ಲಿ 5.7 ಮತ್ತು ದೆಹಲಿಯಲ್ಲಿ 4.0 ಭೂಕಂಪದ ತೀವ್ರತೆ ದಾಖಲಾಗಿದೆ.
ಭೂಕಂಪನಕ್ಕೆ ಹೆದರಿದ ಜನರು ಕಟ್ಟಡಗಳಿಂದ ಹೊರಗೆ ಓಡಿ ಬಂದಿದ್ದಾರೆ.
