
ಒಡಿಶಾ: ಒಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಖಾಸಗಿ ಬಸ್ ನಲ್ಲಿದ್ದ 10 ಜನ ಪ್ರಯಾಣಿಕರು ಸಾವನ್ನಪ್ಪಿರುವ ದಾರುಣ ಘಟನೆ ಒಡಿಶಾದ ಗಂಜಾಂನಲ್ಲಿ ನಡೆದಿದೆ.
ರಾಯಗಢ ಜಿಲ್ಲೆಯ ಗುಡಾರಿ ಪ್ರದೇಶದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಒಎಸ್‌ಆರ್‌ಟಿಸಿ ಬಸ್ ಹಾಗೂ ಬೆಹಾಮುಪರ ಪ್ರದೇದೇಶದ ಖಂಡೇಲಿ ಗ್ರಾಮದಲ್ಲಿ ಮದುವೆ ಮುಗಿಸಿ ಹಿಂದಿರುಗುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ 10 ಜನ ಪ್ರಯಾಣಿಕರು ಸಾವನ್ನಪ್ಪಿದ್ದು, ಮೃತರೆಲ್ಲರೂ ಖಾಸಗಿ ಬಸ್‌ನ ಪ್ರಯಾಣಿಕರು ಎಂದು ಹೇಳಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಬ್ರಹ್ಮಪುರದ ಎಂಕೆಸಿಜೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
