
ಬೆಂಗಳೂರು: ರಾಜ್ಯದಲ್ಲಿ ಕಾವೇರಿ ವಿವಾದ ಭುಗಿಲೆದ್ದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುವುದನ್ನು ವಿರೋಧಿಸಿ ಕರವೇ ಕಾರ್ಯಕತರು, ಅನೇಕ ರೈತ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆಕೊಟ್ಟಿದೆ. ಬಂದ್ ಬಿಸಿ ವಿಮಾನ ಹಾರಾಟಕ್ಕೂ ತಟ್ಟಿದ್ದು, ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ 44 ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿದೆ.
ದೆಹಲಿ, ಮುಂಬೈ, ಕೋಲ್ಕತ್ತಾ, ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದೊಟ್ಟು 22 ವಿಮಾನಗಳು ಹಾಗೂ ಬೆಂಗಳೂರಿನಿಂದ ವಿವಿದೆಡೆಗೆ ಹೋಗಬೇಕಿದ್ದ 22 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ಇನ್ನು ಬಂದ್ ಹಿನ್ನೆಲೆ ರಾಜ್ಯಾದ್ಯಂತ ಚಿತ್ರ ಪ್ರದರ್ಶನ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಓಲಾ, ಊಬರ್, ಆಟೋ ಸೇವೆ ಇಲ್ಲ. ಶಾಪಿಂಗ್ ಮಾಲ್ ಬಂದ್ ಇರಲಿದೆ. ಏರ್ ಪೋರ್ಟ್ ಟ್ಯಾಕ್ಸಿ ಚಾಲಕ ಸಂಘ, ಖಾಸಗಿ ಸಾರಿಗೆ ಸಂಘಟನೆ, ಬಿಬಿಎಂಪಿ ನೌಕರರ ಸಂಘ, ಶಾಲಾ ಸಂಘಟನೆಗಳಾದ ರುಪ್ಸ, ಕ್ಯಾಮ್ಸ್, ಬಾರ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಶನ್ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದೆ.
ಸಾರಿಗೆ ಬಸ್‌ಗಳ ಸಂಚಾರ ಎಂದಿನಂತೆ ಇರಲಿದೆ. ವೈದ್ಯಕೀಯ ಸೇವೆ ಮೆಡಿಕಲ್ ಶಾಪ್‌ಗಳು ಎಂದಿನಂತೆ ಕಾಯನಿವಹಿಸಲಿದೆ. ಬ್ಯಾಂಕ್, ಪೆಟ್ರೋಲ್ ಬಂಕ್, ಸೇರಿದಂತೆ ತುತುಸೇವೆಗೆ ಸಂಬಂಧಿಸಿದ ಎಲ್ಲಾ ಸೇವೆಗಳು ಲಭ್ಯವಾಗಲಿದೆ.
