
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೀ ಗುಡುಗು ಸಹಿತ ಭಾರೀ ಮಳಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಮೀನುಗಾರರಿಗೆ ಮೀನುಗಾರಿಕೆಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಉತ್ತರ ಒಳನಾಡಿನ ಹಲವೆಡೆ ಕೂಡ ಭಾರೀ ಮಳೆಯಾಗುವ ಸಂಭವವಿದೆ ಎಂದು ಸೂಚನೆ ನೀಡಲಾಗಿದೆ.
