
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಮಳೆಯಿಂದಾಗಿ ಅಲ್ಲಲ್ಲಿ ಅಪಾರ ಹಾನಿ ಸಂಭವಿಸಿದ್ದು, ಮಂಗಳೂರು ನಗರದ ಹೊರವಲಯದಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ಮಂಗಳೂರು ಹೊರವಲಯದ ಕೆ.ಎಸ್. ರಸ್ತೆಯಲ್ಲಿರುವ ಗುಡ್ಡ ಕುಸಿದಿದ್ದು, ಸದ್ಯ ಗುಡ್ಡ ಕುಸಿದ ಸ್ಥಳದಲ್ಲಿ ಜಿಲ್ಲಾಡಳಿತ ಟಾಪಲ್ ಹೊದಿಸಿದೆ. ಗುಡ್ಡ ಇನ್ನಷ್ಟು ಕುಸಿಯುವ ಆತಂಕ ಎದುರಾಗಿರುವ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಇನ್ನು, ಕೆ.ಎಸ್.ರಾವ್ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
