
ಉಡುಪಿ/ದ.ಕ: ತಮಿಳುನಾಡಿಗೆ ಕಾವೇರಿ ನೀರು ನೀಡುವುದನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದೆ. ಇದಕ್ಕೆ ಹಲವಾರು ಸಂಘಟನೆಗಳು, ಚಿತ್ರಮಂದಿರಗಳು, ಖಾಸಗಿ ಸಂಸ್ಥೆಗಳು ಸಾಥ್ ನೀಡಿದೆ. ಬಂದ್ ಹಿನ್ನೆಲೆ ಶಾಲಾ-ಕಾಲೇಜಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವಹಿಸಿತ್ತು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಲಾ-ಕಾಲೇಜಿಗೆ ರಜೆ ಇಲ್ಲ ಎಂದು ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಕನಾಟಕ ಬಂದ್ ಹಿನ್ನೆಲೆ ಆಯಾ ಸ್ಥಳದ ಪರಿಸ್ಥಿತಿಯನ್ನು ಗಮನಿಸಿ ಅದರ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಸಕಾರಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವಂತೆ ಸೂಚಿಸಿತ್ತು. ಬಂದ್ ಗೆ ಕರಾವಳಿ ಜಿಲ್ಲೆಗಳಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿರುವ ಹಿನ್ನೆಲೆ ಇಲ್ಲಿನ ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ. ಅಲ್ಲದೇ ವಿದ್ಯಾಥಿಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳ ಸಂಚಾರ ಕೂಡ ಎಂದಿನಂತೆ ಇರಲಿದೆ.
ಇನ್ನು, ಇಂದು ಸಾರಿಗೆ ಬಸ್ ಗಳ ಸಂಚಾರ ಕೂಡ ಇರಲಿದೆ. ಈ ಬಗ್ಗೆ ಪ್ರಯಾಣಿಕರಿಗೆ ಯಾವುದೇ ಚಿಂತೆ ಬೇಡ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ತಿಳಿಸಿದ್ದಾರೆ. ಈ ಹಿನ್ನೆಲೆ ಸಾರಿಗೆ ಹಾಗೂ ಖಾಸಗಿ ಬಸ್ ಗಳ ಸಂಚಾರ ಇರುವುದರಿಂದ ಜನಜೀವನ ಎಂದಿನಂತೆ ಇರುವ ಸಾಧ್ಯತೆ ಇದೆ ಎನ್ನಲಾಗಿದೆ.
