
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರನ್ನು ಹರಿಬಿಡುವುದನ್ನು ವಿರೋಧಿಸಿ ಕರವೇ ಕಾಯಕತರು ಹಾಗೂ ಅನೇಕ ರೈತಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆಕೊಟ್ಟಿದೆ. ಬಂದ್ ನ ಕಾವು ಹೆಚ್ಚುತ್ತಿರುವ ಹಿನ್ನೆಲೆ ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಹಾಗೂ ಗೃಹಕಚೇರಿಗೆ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
ಹೌದು, ರಾಜ್ಯದಲ್ಲಿ ಕಾವೇರಿ ವಿವಾದ ಭುಗಿಲೆದ್ದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸಿಎಂ ಮನೆ ಮುಂದೆ ಭದ್ರತೆ ಅಳವಡಿಸಲಾಗಿತ್ತು. ಕ್ರಮೇಣ ಬಂದ್ ಬಿಸಿ ಹೆಚ್ಚಾಗುತ್ತಿದ್ದಂತೆ ಸಿಎಂ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಾ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 3 ಕೆಎಸ್‌ಆರ್‌ಪಿ ತುಕಡಿಗಳು ಸೇರಿದಂತೆ 30ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇನ್ನು, ಸಿಎಂ ಸಿದ್ದರಾಮಯ್ಯನವರೂ ಕೂಡ ಪ್ರತಿ ಜಿಲ್ಲೆಯ ಬಂದ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕತವ್ಯ ನಿವಹಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
