
ಮೀರತ್: ಕಾರು ಮತ್ತು ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಭಾರತ ತಂಡದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗಾಯಗೊಂಡಿರುವ ಘಟನೆ ಮೀರತ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಪ್ರವೀಣ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೀರತ್‌ನ ಕಮಿಷನರ್ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್‌ವೊಂದು ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕಾರಿಗೆ ಬಂದು ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಪ್ರವೀಣ್ ಕುಮಾರ್ ಗಾಯಗಳೊಂದಿಗೆ ಪಾರಾಗಿದ್ದಾರೆ. ಸ್ಥಳಿಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇದೀಗ ಕ್ಯಾಂಟರ್ ಚಾಲಕ ಪೊಲೀಸರ ವಶದಲ್ಲಿದ್ದಾನೆ.
