
ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಮೋಹನ್ ಇಂದು ಕೊನೆಯುಸಿರೆಳೆದಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಇವರು, ಜೂಲಿ ಜಯಸಿಂಹ ಸೇರಿದಂತೆ ಅನೇಕ ಸಿನಿಮಾಗಳನ್ನು ನಿಮಾಣ ಮಾಡಿದ್ದರು. ಇವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
