
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ 5 ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸರ್ಕಾರದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದರೊಂದಿಗೆ ಗೃಹಲಕ್ಷ್ಮೀ ಯೋಜನೆಯ ಆಪ್ ಅನ್ನು ಕೂಡ ರಿಲೀಸ್ ಮಾಡಲಾಗಿದೆ. ಸೇವಾಸಿಂಧು ಪೋಟಲ್ ನಲ್ಲಿ ಡೌನ್‌ಲೋಡ್ ಮಾಡಿ ಅರ್ಜಿತುಂಬಿ ಪ್ಲೇ ಸ್ಟೋರ್ ನಲ್ಲಿ ಗೃಹಲಕ್ಷ್ಮೀ ಸ್ಕೀಂ ಎಂದು ಕ್ಲಿಕ್ ಮಾಡಿ ಓಪನ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.
ಗೃಹಲಕ್ಷ್ಮೀ ಯೋಜನೆಯಡಿ ಪ್ರತಿಕುಟುಂಬದ ಮಹಿಳೆಯ ಖಾತೆಗೆ ರೂ 2000 ಜಮಾ ಮಾಡಲಾಗುತ್ತದೆ. ಈ ಯೋಜನೆಯ ಸದುಪಯೋಗ ಪಡೆಯಲು ರೇಷನ್‌ಕಾರ್ಡ್, ಆಧಾರ್‌ಕಾರ್ಡ್, ಬ್ಯಾಂಕ್‌ಪಾಸ್‌ಬುಕ್‌ಹಾಗೂ ಯಾವುದದಾದರೂ ಒಂದು ಗುರುತಿನ ಚೀಟಿ ಇದ್ದರೆ ಸಾಕು. ಇನ್ನು, ಮನೆಯ ಯಜಮಾನಿಯ ಪತಿ ಜಿಎಸ್‌ಟಿ ರಿಟನ್ಸ್ ಸಲ್ಲಿಸುವವರಾಗಿದ್ದಲ್ಲಿ ಅವರು ಈ ಸೌಲಭ್ಯ ಪಡೆಯಲು ಅಹ ಫಲಾನುಭವಿ ಆಗಿರುವುದಿಲ್ಲ. ಈ ಯೋಜನೆಗೆ ಅಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ. ಅಜಿ ಸಲ್ಲಿಸಿದವರಿಗೆ ಆಗಸ್ಟ್ 17 ಅಥವಾ 18ರಂದು ಹಣ ಜಮಾ ಮಾಡಲಾಗುತ್ತದೆ.
