Home ಕರ್ನಾಟಕ ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್

ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್

0
ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್

ಬೆಳಗಾವಿ: ಕಾಂಗ್ರೆಸ್‌ ಸರ್ಕಾರ ಅಧಿಕಾರಿಕ್ಕೆ ಬಂದ ಬಳಿಕ ತಾವು ನೀಡಿರುವ ಭರವಸೆಯನ್ನು ಒಂದೊಂದಾಗಿ ಜಾರಿಗೆ ತರುತ್ತಿವೆ. ಅದರಂತೆ ಅಂಗನವಾಡಿ ಕಾರ್ಯಕರ್ತೆಯರೂ ಕೂಡ ತಮ್ಮ ಗೌರವಧನವನ್ನು ಹೆಚ್ಚಸುವಂತೆ ಸರ್ಕಾರದ ಮುಂದೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಸ್ಪಂದನೆ ದೊರಕಿದ್ದು, ಶೀಘ್ರವೇ ಗೌರವಧನವನ್ನು ಹೆಚ್ಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪೂರ್ವ ನೀಡಿರುವ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಕುರಿತು ಸರ್ಕಾರ ಸೂಕ್ತ ನಿಧಾರ ತೆಗೆದುಕೊಳ್ಳಲಿದೆ. ಸ್ವಲ್ಪ ತಾಳ್ಮೆ ಅಗತ್ಯ ಎಂದು ಹೇಳಿದ್ದಾರೆ. ಆ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ.

 

LEAVE A REPLY

Please enter your comment!
Please enter your name here