Home ಕರ್ನಾಟಕ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ

0
ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಡಿನ ಜನತೆ ಬಿಜೆಪಿ, ಆರ್‌ಎಸ್‌ಎಸ್‌ ಸಿದ್ದಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದಕ್ಕಾಗಿ ಪ್ರತ್ಯಕ್ಷ ಮತ್ತುಪರೋಕ್ಷವಾಗಿ ಶ್ರಮಿಸಿದವರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ ವಿಚಾರದಲ್ಲಿ ನಿರ್ದಾಕ್ಷಣ್ಯ ಕ್ರಮ ಕೈಗೊಂಡು ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸೃಷ್ಟಿಯಾಗಿತ್ತು. ಇದನ್ನು ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡುತ್ತೇವೆ. ಈ ನಿಟ್ಟಿನಲ್ಲಿ ಈಗಾಗಲೇ ಕಾಯಪ್ರವೃತ್ತರಾಗಿದ್ದೇವೆ. ಅಲ್ಲದೇ ಸಾಮಾಜಿಕ ಜಾಲತಾಣದ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ನಾವು ನಾಡಿನ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಇನ್ನು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ. ರೈತರ ಹಿತ ಕಾಪಾಡಲು ಮತ್ತು ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

 

LEAVE A REPLY

Please enter your comment!
Please enter your name here