
ಬೆಂಗಳೂರು: ದಂಪತಿಗಳಿಬ್ಬರು ರಾತ್ರಿ ವಾಕಿಂಗ್ ಮಾಡುತ್ತಿರುವ ವೇಳೆ ಸ್ಯಾಂಡಲ್‌ವುಡ್ ನಟ ನಾಗಭೂಷಣ್ ಅವರಿದ್ದ ಕಾರು ಡಿಕ್ಕಿಯಾದ ಪರಿಣಾಮ, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಸಂತನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರೇಮಾ(48) ಎಂದು ಗುರುತಿಸಲಾಗಿದೆ. ಆಕೆಯ ಪತಿ ಕೃಷ್ಣಾ(58) ಗಂಭೀರವಾಗಿ ಗಾಯಗೊಂಡಿದ್ದಾರೆ. ದಂಪತಿಗಳಿಬ್ಬರು ವಸಂತಪುರ ಮುಖ್ಯರಸ್ತೆಯ ಫುಟ್ ಬಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೇ ವೇಗವಾಗಿ ಆಗಮಿಸಿದ ಕಾರು ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ , ಬಲಿಕ ದಂಪತಿಗೆ ಡಿಕ್ಕಿಹೊಡೆದಿದೆ. ಅಪಘಾತದ ರಭಸಕ್ಕೆ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್. ಲೇಔಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಟ ನಾಗಭೂಷಣ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
