
ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ವಿವಾದ ಭುಗಿಲೆದ್ದಿದ್ದು, ಕರವೇ ಕಾರ್ಯಕರ್ತರು ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಶಿಕ್ಷಣ ಇಲಾಖೆ, ಕರ್ನಾಟಕ ಬಂದ್ ಹಿನ್ನೆಲೆ ಆಯಾ ಸ್ಥಳದ ಪರಿಸ್ಥಿತಿಯನ್ನು ಗಮನಿಸಿ ಅದರ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವಂತೆ ಸೂಚಿಸಿದೆ. ಇನ್ನು, ಖಾಸಗಿ ಶಾಲಾ ಒಕ್ಕೂಟ ಬಂದ್ ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ್ದು, ರಜೆ ನೀಡುವ ಅಧಿಕಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗೆ ನೀಡಿದೆ.
