
ಧಾರವಾಡ: ಶೀಘ್ರದಲ್ಲೇ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಅಧಿಕೃತವಾಗಿ ಸಂಚರಿಸಲಿದ್ದು, ಸೋಮವಾರ ನಡೆಸಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ.
ಈ ಬಗ್ಗೆ ಮಾತನಾಡಿರುವ ನೈರುತ್ಯ ರೇಲ್ವೆಯ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್, ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪ್ರಾಯೋಗಿಕ ಸಂಚಾರ ಎಲ್ಲಾ ಬಗೆಯ ಪರೀಕ್ಷೆಗಳು ಯಶಸ್ವಿಯಾಗಿದ್ದು, ಇದೇ 26ರಂದು ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಅಧಿಕೃತವಾಗಿ ಸಂಚಾರವಾಗಲಿದೆ.
