
ಬೆಂಗಳೂರು: ಬೈಕ್ ಮತ್ತು ಮೂರು ಕಾರುಗಳ ನಡುವೆ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಕಾರು ಚಾಲಕ ಪ್ರಖ್ಯಾತ್ ಚಿನ್ನಪ್ಪ(22) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಪೀಣ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
