
ಉಡುಪಿ: ಖಚಿತ ಮಾಹಿತಿ ಮೇರೆಗೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಹೆರ್ಗಾದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ತಾಲೂಕಿನ ಹೆರ್ಗಾ ಗ್ರಾಮದಲ್ಲಿ ನಡೆದಿದೆ.
ಬಂಧಿತರನ್ನು ಮಂಡ್ಯದ ಶಿವರಾಜ(38), ಬಾಗಲಕೋಟೆಯ ನಿಂಗಪ್ಪ ಅಂಬಿಗೇರಾ(29) ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ವೇಳೆ ಇನ್ನೊಬ್ಬ ಆರೋಪಿ ನವೀನ್ ಗೌಡ ಎಂಬಾತ ಪರಾರಿಯಾಗಿದ್ದು, ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ದಾಳಿ ವೇಳೆ ಆರೋಪಿಗಳಿಂದ 2 ಮೊಬೈಲ್, ನಗದು 15000 ರೂ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ರಮ ಹಣಗಳಿಸುವ ಉದ್ದೇಶದಿಂದ ಹುಡುಗಿಯರನ್ನು ಪುಸಲಾಯಿಸಿ ಕರೆತಂದು ಅನೈತಿಕ ಚಟುವಟಿಕೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಇನ್ನು, ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
