
ವಿಭಿನ್ನ ಸಿನಿಮಾಗಳ ಮೂಲಕವೇ ಜನರನ್ನು ಮನರಂಜಿಸುವ ರಾಜ್ ಬಿ ಶೆಟ್ಟಿಯವರು ಇದೀಗ ಮತ್ತೊಂದು ಹೊಸ ಸಿನಿಮಾದ ಮೋಷನ್ ಪೋಸ್ಟರ್ ಅನ್ನು ರಿಲೀಸ್ ಮಾಡುವ ಮೂಲಕ ಸಿನಿಮಾ ಬಿಡುಗಡೆ ದಿನಾಂಕ ಕೂಡ ರಿಲೀಸ್ ಮಾಡಿದ್ದಾರೆ.
ಹೌದು, ನಟ ನಿರ್ದೇಶಕ ರಾಜ್ ಬಿ ಶೆಟ್ಟಿಯವರು ಹೊಸ ಚಿತ್ರ ಅನೌನ್ಸ್ ಮಾಡಿದ್ದು, ಈ ಸಿನಿಮಾಕ್ಕೆ ಟೋಬಿ ಎಂದು ಟೈಟಲ್ ಇಟ್ಟಿದ್ದಾರೆ. ಮಾರಿ…ಮಾರಿ…ಮಾರಿಗೆ ದಾರಿ ಎನ್ನುವ ಕ್ಯಾಪ್ಷನ್ ಮೂಲಕ ಟೋಬಿ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಈ ವೇಳೆ ಅಗಸ್ಟ್ 25ರಂದು ಸಿನಿಮಾ ಬಿಡುಗಡೆ ಮಾಡಲಾಗುವುದು ಎನ್ನುವುದನ್ನು ಕೂಡ ತಿಳಿಸಿದ್ದಾರೆ. ಸಿನಿಮಾದ ಮೋಷನ್ ಪೋಸ್ಟರ್ ಎಲ್ಲರ ಗಮನಸೆಳೆಯುತ್ತಿದ್ದು, ಲೈಟರ್ ಬುದ್ಧ ಫಿಲ್ಮ್ಸ್ ನಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾ ಸಿನಿ ಪ್ರೇಕ್ಷಕರಲ್ಲಿ ಕುತೂಹಲವನ್ನು ಹೆಚ್ಚಿಸಿದೆ.
