Home ಕರ್ನಾಟಕ ಶಕ್ತಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ಶಕ್ತಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನೀಡಿರುವ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. ಸರ್ಕಾರಿ ಬಸ್‌ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಸಂಚರಿಸುವ ಅವಕಾಶವನ್ನು ಈ ಯೋಜನೆಯಲ್ಲಿ ಕಲ್ಪಸಲಾಗಿದ್ದು, ಇದನ್ನು ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಬಿಡಗಡೆಗೊಳಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಹತ್ತರಿಂದ ಹದಿನೈದು ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾಟ್‌ ಕಾರ್ಡ್ ವಿತರಣೆ ಮಾಡುವ ಮೂಲಕ ಚಾಲನೆ ದೊರೆಯಲಿದೆ. ರಾಜ್ಯದ ಮಹಿಳೆಯರು ರಾಜ್ಯದೊಳಗೆ 4 ಸಾರಿಗೆ ನಿಗಮಗಳ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆ ಬಸ್ ಗಳಲ್ಲಿ #Shakti #scheme #KarnatakaGovernmentಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

 
Previous articleಮೆಸ್ಕಾಂ ಅಧಿಕಾರಿ ಸೋಗಿನಲ್ಲಿ ವಂಚನೆ: ಪ್ರಕರಣ ದಾಖಲು
Next articleಬಸ್‌ ಮತ್ತು ಬೈಕ್‌ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು