
ಕಾರ್ಕಳ: ಸರ್ವೀಸ್ ಪಾಯಿಂಟ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬುಧವಾರ ಬೆಳಿಗ್ಗೆ ಕಾರ್ಕಳದ ಸಾಲ್ಮರದಲ್ಲಿರುವ ಎಕ್ಸಿಸ್ ಬ್ಯಾಂಕ್‌ನಲ್ಲಿ ನಡೆದಿದೆ.
ಅವಘಡದಲ್ಲಿ ಸರ್ವರ್, ಇನ್ವಟರ್ ಸೇರಿ ಹಲವು ಎಲೆಕ್ಟ್ರಿಕಲ್ ಪರಿಕರಗಳು ಬೆಂಕಿಗಾಹುತಿಯಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಬ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಬಿಲ್ಡಿಂಗ್ ಮಾಲಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ.ಸಂಜೀವ್, ಸಿಬ್ಬಂದಿ ಜಯ ಮೂಲ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು.
