
ಬೆಂಗಳೂರು: ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ದಿಲ್ಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ಭೇಟಿ ಕೊಟ್ಟು, ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಿತ್ ಶಾ ಜೊತೆಗೆ ರಾಜ್ಯದಲ್ಲಿ ಜಾರಿಗೊಳಿಸಿರುವ ಅನುಷ್ಠಾನಗಳ ಬಗ್ಗೆ ಚರ್ಚಿಸುವುದರ ಜೊತೆಗೆ ಹೆಚ್ಚುವರಿ ಅಕ್ಕಿಗೆ ಕೇಂದ್ರದಿಂದ ತಡೆಯೊಡ್ಡಿರುವ ಬಗ್ಗೆಯು ಮಾತನಾಡಿದ್ದಾರೆ ಎನ್ನಲಾಗಿದೆ. ಅಂತೆಯೇ ರಾಜ್ಯದ ಕಾನೂನಿನಲ್ಲಿ ಆಗಿರುವ ಹಲವು ಬದಲಾವಣೆ ಕುರಿತು ಪ್ರಸ್ತಾಪಿಸಿ ಅವುಗಳ ಕುರಿತು ಗೃಹ ಸಚಿವರಿಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.
