Home ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ನಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಸಿಎಂ ಸಿದ್ದರಾಮಯ್ಯ ಪತ್ನಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

0
ಸಿಎಂ ಸಿದ್ದರಾಮಯ್ಯ ಪತ್ನಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆ ಸಿಎಂ ದೆಹಲಿ ಪ್ರವಾಸದ ಸಮಯದಲ್ಲಿ ಬದಲಾವಣೆಯಾಗಿದೆ ಎಂದು ಹೇಳಲಾಗಿದೆ.
ಮಂಗಳವಾರ ರಾತ್ರಿ 11:30ಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ 11:30 ಸಿಎಂ ಸಿದ್ದರಾಮಯ್ಯ ಹೆಚ್‌ಎಎಲ್‌ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಬೇಕಿತ್ತು. ಇದೀಗ ಅವರ ಪತ್ನಿ ಆಸ್ಪತ್ರೆಗೆ ದಾಖಲಾಗಿರುವುದರಿಂದ ಸಿಎಂ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯ ಆರೋಗ್ಯ ವಿಚಾರಿಸಿ ಬಳಿಕ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆ ದೆಹಲಿ ಪ್ರವಾಸದ ಸಮಯದಲ್ಲಿ ಬದಲಾವಣೆ ಆಗಲಿದೆ ಎನ್ನಲಾಗಿದೆ.

 

LEAVE A REPLY

Please enter your comment!
Please enter your name here