ಮೈಸೂರು:ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತಿದ್ದು, ಈಗಾಗಲೇ ಈ ಬಗ್ಗೆ ಮಾರ್ಗಸೂಚಿಗಳನ್ನೂ ಕೂಡ ಬಿಡುಗಡೆಯಾಗಿದೆ. ಇದೀಗ ಸರ್ಕಾರ ಈ ಎಲ್ಲಾ ಯೋಜನೆಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇಂತಹ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ವನ್ನು ಮೈಸೂರಿನಲ್ಲಿ ಹಾಗೂ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿ ಜಿಲ್ಲೆಯಲ್ಲಿ ಶೀಘ್ರವೇ ಜಾರಿಗೆ ತರಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ನಾಳೆ ಶಕ್ತಿ ಯೋಜನೆಗೆ ಚಾಲನೆ ದೊರಕಲಿದ್ದು, ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಗೆ ಶೀಘ್ರವೇ ಚಾಲನೆ ಸಿಗಲಿದೆ ಎಂದರು. ಈ ಮೂಲಕ ಕಾಂಗ್ರೆಸ್ ನೀಡಿರುವ 5ಗ್ಯಾರಂಟಿಗಳಲ್ಲಿ ಒಂದೊಂದನ್ನೇ ಜನರಿಗೆ ತಲುಪಿಸುತ್ತಿದ್ದು, ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಮುಂದಾಗಿದೆ.
