
ಹೈದರಾಬಾದ್: ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾ ಈಗಾಗಲೇ ತೆರೆಕಂಡಿದ್ದು, ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾದ ಕುರಿತು ಅನೇಕ ಟ್ರೋಲ್ ಗಳೂ ಕೂಡ ಆಗುತ್ತಿವೆ. ಸಿನಿಮಾವನ್ನು ಬ್ಯಾನ್ ಮಾಡುವಂತೆ ಆಗ್ರಹಿಸಲಾಗುತ್ತಿದೆ. ಇತ್ತೀಚೆಗೆ ನೇಪಾಳದ ಕಠ್ಮಂಡುವಿನಲ್ಲಿ ಸಿನಿಮಾ ಬ್ಯಾನ್ ಮಾಡುವಂತೆ ಕೋರ್ಟ್ ನ ಮೊರೆ ಹೋಗಲಾಗಿತ್ತು. ಆದರೆ ಸೆನ್ಸಾರ್ ಮಂಡಳಿ ಅಂಗೀಕರಿಸಿರುವ ಸಿನಿಮಾದ ಮೇಲೆ ಬ್ಯಾನ್ ಹೇರದಂತೆ ಕೋರ್ಟ್ ಸೂಚಿಸಿದೆ.
ಹೌದು, ಆದಿಪುರುಷ್ ಸಿನಿಮಾದಲ್ಲಿ ಸೀತೆ ಭಾರತದ ಮಗಳು ಎಂದು ಉಲ್ಲೇಖಿಸಿರುವ ಹಿನ್ನೆಲೆ ಸಿನಿಮಾವನ್ನು ಬ್ಯಾನ್ ಮಾಡುವಂತೆ ಆಗ್ರಹಿಸಲಾಗಿತ್ತು. ಆದರೆ, ಸೆನ್ಸಾರ್ ಬೋಡ್ ಒಪ್ಪಿಗೆ ನೀಡಿದ ಯಾವುದೇ ಸಿನಿಮಾವನ್ನು ಬ್ಯಾನ್ ಮಾಡಬಾರದು ಎಂದು ಹೇಳುವ ಮೂಲಕ ಆದಿಪುರುಷ್ ಸಿನಿಮಾದ ಮೇಲಿದ್ದ ಬ್ಯಾನ್ ಅನ್ನು ಕೋರ್ಟ್ ತೆರವುಗಳಿಸಿ ಆದೇಶಿಸಿದೆ.
ಇನ್ನು, ಇತ್ತೀಚೆಗೆ ಸಿನಿಮಾ ಬ್ಯಾನ್‌ಮಾಡುವಂತೆ ಆಲ್‌ಇಂಡಿಯಾ ಸಿನಿ ವರ್ಕರ್ ಅಸೋಸಿಯೇಷನ್‌ಪತ್ರದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿತ್ತು. ಈ ಬಗ್ಗೆ ಪತ್ರ ಬರೆದಿರುವ ಅವರು, ಸಿನಿಮಾದಲ್ಲಿ ವಿವಾದ ಹುಟ್ಟು ಹಾಕುವಂಥ ಸಾಕಷ್ಟು ಸನ್ನಿವೇಶಗಳಿವೆ. ಕಥೆಯನ್ನು ಮನಸ್ಸಿಗೆ ಬಂದಂತೆ ಕಟ್ಟಿಕೊಡಲಾಗಿದೆ. ಈ ಚಿತ್ರದ ಸಂಭಾಷಣೆ ಎಲ್ಲರಿಗೂ ನೋವನ್ನುಂಟು ಮಾಡಿದೆ. ಈ ಹಿನ್ನೆಲೆ ಸಿನಿಮಾವನ್ನು ಥಿಯೇಟರ್‌ಹಾಗೂ ಒಟಿಟಿ ಎರಡಲ್ಲೂ ಪ್ರಸಾರ ಮಾಡದಂತೆ ಬ್ಯಾನ್‌ಮಾಡಬೇಕು ಎಂದಿದ್ದಾರೆ.
