ಅಹಮದಾಬಾದ್: ಇಂದಿನಿಂದ ಭಾರತದಲ್ಲಿ ಐಸಿಸಿ ಪುರಷರ ಕ್ರಿಕೆಟ್ ವಿಶ್ವಕಪ್ 2023 ಆರಂಭಗೊಳ್ಳಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್, ನ್ಯೂಜಿಲೆಂಡ್ ಅನ್ನು ಎದುರಿಸಲಿದೆ. ಈ ಬಾರಿ ಒಟ್ಟು 10 ಸ್ಥಳಗಳಲ್ಲಿ 48 ಪಂದ್ಯಗಳು ನಡೆಯಲಿವೆ.
ಭಾರತ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8ರಂದು ಚೈನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಬಾರಿಯ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ, ಇಂಗ್ಲೆಂಡ್, ಪಾಕಿಸ್ತಾನ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯಜಿಲೆಂಡ್, ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ನೆದರ್ಲ್ಯಾಂಡ್ ಸೇರಿದಂತೆ ಒಟ್ಟು 10ತಂಡಗಳು ಭಾಗವಹಿಸಲಿವೆ.
2023ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ನರೇಂದ್ರ ಮೋದಿ ಸ್ಟೇಡಿಯಂ ಅಹಮದಾಬಾದ್, ಚಿನ್ನಸ್ವಾಮಿ ಕ್ರೀಡಾಂಗಣ ಬೆಂಗಳೂರು, ಎಂ.ಎ.ಚಿದಂಬರಂ ಸ್ಟೇಡಿಯಂ ಚೆನ್ನೈ, ಅರುಣ್ ಜೇಟ್ಲಿ ಸ್ಟೇಡಿಯಂ ದೆಹಲಿ, ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣ ಧಮಶಾಲಾ, ಈಡನ್ ಗಾಡನ್ಸ್ ಕೋಲ್ಕತ್ತಾ, ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ ಲಕ್ನೋ, ವಾಂಖೆಡೆ ಸ್ಟೇಡಿಯಂ ಮುಂಬೈ, ಎಂಸಿಎ ಅಂತರಾಷ್ಟ್ರೀಯ ಕ್ರೀಡಾಂಗಣ ಪುಣೆ, ರಾಜೀವ್ ಗಾಂಧಿ ಇಂಟರ್ ನ್ಯಾಟ್ ಸ್ಥಳಗಳಲ್ಲಿ ನಡೆಯಲಿವೆ.
ಇನ್ನು, 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನ ಹಗಲು ಪಂದ್ಯಗಳು ಬೆಳಿಗ್ಗೆ 10:30ಕ್ಕೆ ಆರಂಭವಾಗಲಿದ್ದು, ಹಗಲು-ರಾತ್ರಿ ಪಂದ್ಯಗಳು ಮಧ್ಯಾಹ್ನ 2ಗಂಟೆಗೆ ಆರಂಭವಾಗಲಿದೆ. ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಎಲ್ಲಾ 48ಪಂದ್ಯಗಳನ್ನು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗತ್ತದೆ.
