
ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆ ಮೂರು ದಿನಗಳ ಕಾಲ ಶಾಲಾ-ಕಾಲೇಜಿಗೂ ಕೂಡ ರಜೆಯನ್ನು ಘೋಷಿಸಲಾಗಿತ್ತು.ಮಳೆಗೆ ಜೀವಹಾನಿ ಹಾಗೂ ಅಪಾರ ನಷ್ಟ ಕೂಡ ಉಂಟಾಗಿದೆ. ಹೀಗಾಗಿ ಪ್ರಾಕೃತಿಕ ವಿಕೋಪ ನಿರ್ವಹಣೆ ಪಡೆಯ ಒಂದು ತಂಡವನ್ನು ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಕೂಮರಾವ್ ಎಂ ರಾಜ್ಯ ಸಕಾರದ ಮುಖ್ಯ ಕಾರ್ಯದರ್ಶಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇನ್ನು, ಭಾರೀ ಮಳೆಯಿಂದಾಗ ಜಿಲ್ಲೆಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಅಂತಹ ಪ್ರದೇಶಗಳಿಗೆ ಭೇಟಿ ಕೊಟ್ಟ ಜಿಲ್ಲಾಧಿಕಾರಿ ಕೂರ್ಮರಾವ್ ಇಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದರೊಂದಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವವರಿಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ತಿಳಿಸಿದರು.
ಈ ಬಗ್ಗೆ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿವಹಣೆ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿಪತ್ತು ನಿವಹಣೆಗೆ ರಚಿಸಲಾಗಿರುವ ಎಲ್ಲಾ ವಾಡ್ ಮತ್ತು ಗ್ರಾಮ ತಾಲೂಕು ಮಟ್ಟ ಸೇರಿದಂತೆ ಎಲ್ಲಾ ಟಾಸ್ಕ್ ಫೋಸ್ ತಂಡಗಳು ಕ್ರೀಯಾಶೀಲವಾಗಿ ಕಾಯ ನಿವಹಿಸಬೇಕು ಎಂದರು.
