ಉಡುಪಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಯುವ ಹಿನ್ನೆಲೆ ಉಡುಪಿಯಲ್ಲಿ ಜೂನ್ 12ರಿಂದ 17ರವರೆಗೆ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂಮರಾವ್ ಎಂ, ಜಿಲ್ಲೆಯ ಒಟ್ಟು 7ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ ಪರೀಕ್ಷೆ ಸುಸೂತ್ರವಾಗಿ ನಡೆಯುವ ಸಲುವಾಗಿ ನಿಗದಿತ ದಿನಾಂಕದವರೆಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಸೆಕ್ಷನ್ 144(1)ರ ಅನ್ವಯ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ.
