
ಉಡುಪಿ: ಜಿಲ್ಲೆಯ ಪಡುಬಿದ್ರಿಯ ಕಾಡಿ ಪಣ್ಣದಲ್ಲಿ ಸಮುದ್ರ ಕೊರೆತ ಉಂಟಾಗಿದ್ದು, ಈ ಪ್ರದೇಶಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಸಂಭವಿಸುವ ಕಡೆಲ್ಕೊರೆತ ತಡೆಯಲು ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದಾಗಿ ಈವರೆಗೆ ಮೃತಪಟ್ಟ ಏಳು ಮಂದಿಯ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ ಪರಿಹಾರವನ್ನು ವಿತರಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯಿಂದಾಗಿ ಜೀವಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂಧರ್ಭ ಕಾಪು ಶಾಸಕ ಸುರೇಶ್ ಶೆಟ್ಟಿ ಗುಮೆ, ಜಿಲ್ಲಾಧಿಕಾರಿ ಕೂಮರಾವ್ ಎಂ, ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್ ಮೊದಲಾದವರು ಉಪಸ್ಥಿತರಿದ್ದರು.
